Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:14 - ಕನ್ನಡ ಸತ್ಯವೇದವು C.L. Bible (BSI)

14 ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:14
27 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು