Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:15 - ಕನ್ನಡ ಸತ್ಯವೇದವು C.L. Bible (BSI)

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:15
42 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು