Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:16 - ಕನ್ನಡ ಸತ್ಯವೇದವು C.L. Bible (BSI)

16 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರದೇವರಾದ ಯೆಹೋವಕರ್ತನು ಇಂತೆನ್ನುತ್ತಾನೆ - ಎಲ್ಲಾ ಚೌಕಗಳಲ್ಲಿ ಕಿರಿಚಾಟವಾಗುವದು, ಸಕಲ ಬೀದಿಗಳಲ್ಲಿ ಅಯ್ಯಯ್ಯೋ ಎಂದು ಅರಚಿಕೊಳ್ಳುವರು; ರೈತರನ್ನು ಪ್ರಲಾಪಿಸುವದಕ್ಕೂ ಗೋಳಾಟದವರನ್ನು ಗೋಳಿಡುವದಕ್ಕೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:16
23 ತಿಳಿವುಗಳ ಹೋಲಿಕೆ  

ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ:


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು