Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:17 - ಕನ್ನಡ ಸತ್ಯವೇದವು C.L. Bible (BSI)

17 ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ಲಾ ದ್ರಾಕ್ಷೆಯ ತೋಟಗಳಲ್ಲಿ ರೋದನವಾಗುವದು; ಏಕಂದರೆ ನಾನು ನಿಮ್ಮ ನಡುವೆ [ಸಂಹಾರಕನಾಗಿ] ಹಾದುಹೋಗುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದ್ರಾಕ್ಷಿತೋಟಗಳಲ್ಲಿ ಜನರು ಯಾಕೆ ಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:17
11 ತಿಳಿವುಗಳ ಹೋಲಿಕೆ  

ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು