Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:2 - ಕನ್ನಡ ಸತ್ಯವೇದವು C.L. Bible (BSI)

2 “ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ, ಮತ್ತೆ ಏಳಳು; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನೆತ್ತಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:2
27 ತಿಳಿವುಗಳ ಹೋಲಿಕೆ  

“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು