Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:20 - ಕನ್ನಡ ಸತ್ಯವೇದವು C.L. Bible (BSI)

20 ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನ ದಿನವು ಕತ್ತಲೆಯೇ ಸರಿ, ಬೆಳಕಲ್ಲವಲ್ಲಾ; ಹೌದು, ಯಾವ ವಿುಣುಕೂ ಇಲ್ಲದ ಗಾಢಾಂಧಕಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನ ನ್ಯಾಯತೀರ್ಪಿನ ದಿವಸವು ಬೆಳಕಿನ ದಿವಸವಾಗಿರದೆ ಕತ್ತಲೆಯ ದಿವಸವಾಗಿರುವುದು; ಬೆಳಕಿನ ಮಿಣಕೂ ಇಲ್ಲದ ಅಂಧಕಾರದ ದಿನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:20
13 ತಿಳಿವುಗಳ ಹೋಲಿಕೆ  

ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು