Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:23 - ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿಮ್ಮ ಗೀತಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣಾನಾದಕ್ಕೆ ಕಿವಿಗೊಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:23
5 ತಿಳಿವುಗಳ ಹೋಲಿಕೆ  

ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು