Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:27 - ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ತಳ್ಳುವೆನು; ಸೇನಾಧೀಶ್ವರ ದೇವರೆಂಬ ಯೆಹೋವನು ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ನಾನು ನಿನ್ನನ್ನು ದಮಸ್ಕದ ಆಚೆಗೆ ಸೆರೆಯಾಳಾಗಿ ಕಳುಹಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:27
10 ತಿಳಿವುಗಳ ಹೋಲಿಕೆ  

ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು