Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:3 - ಕನ್ನಡ ಸತ್ಯವೇದವು C.L. Bible (BSI)

3 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಭಟರಲ್ಲಿ ನೂರು ಮಂದಿ ಉಳಿಯುವರು; ಒಂದು ಊರಿನಿಂದ ಹೊರಟ ನೂರು ದಂಡಾಳುಗಳಲ್ಲಿ ಇಸ್ರಾಯೇಲ್ ವಂಶಕ್ಕೆ ಹತ್ತು ಜನ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:3
10 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಮನೆಯೊಂದರಲ್ಲಿ ಹತ್ತುಮಂದಿ ಉಳಿದಿದ್ದರೂ ಅವರೆಲ್ಲರೂ ಸಾಯುವರು.


ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು