Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:4 - ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:4
27 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು