Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:5 - ಕನ್ನಡ ಸತ್ಯವೇದವು C.L. Bible (BSI)

5 ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲನ್ನು ಸೇರಬಾರದು, ಬೇರ್ಷೆಬಕ್ಕೆ ಯಾತ್ರೆಹೋಗದಿರಿ; ಗಿಲ್ಗಾಲು ಗಡೀಪಾರಾಗುವದು, ಬೇತೇಲು ಬೈಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:5
34 ತಿಳಿವುಗಳ ಹೋಲಿಕೆ  

“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.


ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.


ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.


ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ಇಸಾಕನು ಅಲ್ಲಿಂದ ಹೊರಟು ಬೇರ್ಷೆಬಕ್ಕೆ ಬಂದನು.


ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.


ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು