Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಸೆರೆಗೆ ಒಯ್ಯಲ್ಪಡುವವರ ಮುಂದುಗಡೆ ಅವರು ಸೆರೆಗೆ ಹೋಗುವರು; ಒರಗಿಕೊಳ್ಳುವವರ ಹರ್ಷಧ್ವನಿಯು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:7
17 ತಿಳಿವುಗಳ ಹೋಲಿಕೆ  

ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”


ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.


ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.


“ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು