Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:8 - ಕನ್ನಡ ಸತ್ಯವೇದವು C.L. Bible (BSI)

8 ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:8
28 ತಿಳಿವುಗಳ ಹೋಲಿಕೆ  

“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II


ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”


ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು