Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:11 - ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆಮೋಸನು, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಾಯೇಲರು ಖಂಡಿತವಾಗಿ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರು” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು - ಯಾರೊಬ್ಬಾಮನು ಖಡ್ಗದಿಂದ ಹತನಾಗುವನು, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂದು ನುಡಿದಿದ್ದಾನೆ ಎಂಬದಾಗಿ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:11
13 ತಿಳಿವುಗಳ ಹೋಲಿಕೆ  

ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II


ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.


“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.


“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.


ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು