Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:15 - ಕನ್ನಡ ಸತ್ಯವೇದವು C.L. Bible (BSI)

15 ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:15
15 ತಿಳಿವುಗಳ ಹೋಲಿಕೆ  

“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.


ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.


ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು