Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:16 - ಕನ್ನಡ ಸತ್ಯವೇದವು C.L. Bible (BSI)

16 “ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:16
14 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು