Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:2 - ಕನ್ನಡ ಸತ್ಯವೇದವು C.L. Bible (BSI)

2 ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಿಡತೆಗಳು ದೇಶದ ಎಲ್ಲಾ ಹುಲ್ಲನ್ನು ತಿಂದುಬಿಟ್ಟವು. ಆ ಬಳಿಕ ನಾನು ಹೇಳಿದ್ದೇನೆಂದರೆ, “ನನ್ನ ಒಡೆಯನಾದ ಯೆಹೋವನೇ, ನಮ್ಮನ್ನು ಕ್ಷಮಿಸು. ಯಾಕೋಬನು ತೀರಾ ದುರ್ಬಲನಾಗಿರುವದರಿಂದ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನಿಗಾಗಿ ನಾನು ನಿನ್ನನ್ನು ಬೇಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:2
20 ತಿಳಿವುಗಳ ಹೋಲಿಕೆ  

ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.


ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು