Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದು ಮಹಾಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಡಬೇಕೆಂದಿತ್ತು. ಆಗ ನಾನು - ಕರ್ತನಾದ ಯೆಹೋವನೇ, ಲಾಲಿಸು, ಇದನ್ನು ತಪ್ಪಿಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:5
9 ತಿಳಿವುಗಳ ಹೋಲಿಕೆ  

ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು