Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:10
30 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.


ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.


“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.


ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.”


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು