Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:11 - ಕನ್ನಡ ಸತ್ಯವೇದವು C.L. Bible (BSI)

11 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತಿವೆ; ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ನಿಮ್ಮ ದೇಶದಲ್ಲಿ ಹಸಿವೆಯ ದಿವಸಗಳನ್ನು ಬರಮಾಡುವೆನು. ಜನರು ರೊಟ್ಟಿಗಾಗಿ ಹಸಿಯುವುದಿಲ್ಲ. ನೀರಿಗಾಗಿ ಬಾಯಾರುವದಿಲ್ಲ. ಇಲ್ಲ! ಜನರು ಯೆಹೋವನ ವಾಕ್ಯಕ್ಕಾಗಿ ಹಸಿವೆಯುಳ್ಳವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:11
12 ತಿಳಿವುಗಳ ಹೋಲಿಕೆ  

ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು