ಆಮೋಸ 8:2 - ಕನ್ನಡ ಸತ್ಯವೇದವು C.L. Bible (BSI)2 ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |