Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:3 - ಕನ್ನಡ ಸತ್ಯವೇದವು C.L. Bible (BSI)

3 ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:3
21 ತಿಳಿವುಗಳ ಹೋಲಿಕೆ  

ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.


ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!


ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು