Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:8 - ಕನ್ನಡ ಸತ್ಯವೇದವು C.L. Bible (BSI)

8 ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:8
22 ತಿಳಿವುಗಳ ಹೋಲಿಕೆ  

ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಈಜಿಪ್ಟ್ ನದಿ ಉಬ್ಬಿದೆ, ನೈಲ್ ನದಿಯಂತೆ ಈಜಿಪ್ಟೆಂಬ ಪ್ರವಾಹವೇ ತುಂಬಿ ತುಳುಕುತ್ತಿದೆ ನೈಲಿನ ಶಾಖೆಗಳಂತೆ, ‘ನಾನು ಉಬ್ಬಿಕೊಂಡು ಲೋಕದೊಳಗೆಲ್ಲಾ ಹಬ್ಬುವೆನು ನಗರಗಳನ್ನೂ ಅವುಗಳ ನಿವಾಸಿಗಳನ್ನೂ ನಾಶಮಾಡುವೆನು’ ಎಂದುಕೊಳ್ಳುತ್ತಿರುವುದು.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು