ಆಮೋಸ 8:9 - ಕನ್ನಡ ಸತ್ಯವೇದವು C.L. Bible (BSI)9 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಹೀಗೆನ್ನುತ್ತಾನೆ, “ಆ ದಿವಸಗಳಲ್ಲಿ ನಡುಮಧ್ಯಾಹ್ನದಲ್ಲಿಯೇ ಸೂರ್ಯನನ್ನು ಮುಳುಗುವಂತೆ ಮಾಡುವೆನು. ಶುಭ್ರವಾದ ಹಗಲಿನಲ್ಲಿ ಕತ್ತಲು ಉಂಟಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |