Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:11
37 ತಿಳಿವುಗಳ ಹೋಲಿಕೆ  

ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?


ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II


ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II


ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


“ಸರ್ವೇಶ್ವರನಾದ ನಾನು ಜುದೇಯದ ಸೈನ್ಯಗಳು ಮೊದಲು ಜಯಗಳಿಸುವಂತೆ ಮಾಡುವೆನು. ಆಗ ದಾವೀದ ವಂಶದವರ ಹಾಗೂ ಜೆರುಸಲೇಮಿನವರ ಘನತೆ ಗೌರವ ಜುದೇಯದವರ ಘನತೆ ಗೌರವವನ್ನು ಮೀರದು.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು