Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:12
17 ತಿಳಿವುಗಳ ಹೋಲಿಕೆ  

ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಮೋವಾಬ್ ಪ್ರಾಂತ್ಯವು ನನ್ನ ಸ್ನಾನ ಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು!” II


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು