Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:3 - ಕನ್ನಡ ಸತ್ಯವೇದವು C.L. Bible (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:3
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.


ಎದೆಗುಂದಿದವರಾದರು ಆ ವಿದೇಶಿಯರು ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು.


ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು