Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:5 - ಕನ್ನಡ ಸತ್ಯವೇದವು C.L. Bible (BSI)

5 ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:5
17 ತಿಳಿವುಗಳ ಹೋಲಿಕೆ  

ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II


ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II


ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು