Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:6 - ಕನ್ನಡ ಸತ್ಯವೇದವು C.L. Bible (BSI)

6 ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:6
9 ತಿಳಿವುಗಳ ಹೋಲಿಕೆ  

ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು