Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:8 - ಕನ್ನಡ ಸತ್ಯವೇದವು C.L. Bible (BSI)

8 ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:8
27 ತಿಳಿವುಗಳ ಹೋಲಿಕೆ  

ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.


‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು