Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:1 - ಕನ್ನಡ ಸತ್ಯವೇದವು C.L. Bible (BSI)

1 ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪುರಾತನಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಬಾಯಿಂದ ಭಾಗಭಾಗವಾಗಿಯೂ ವಿಧವಿಧವಾಗಿಯೂ ಮಾತಾಡಿದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅದ್ಲ್ಯಾ ಎಳಾತ್ ದೆವಾನ್ ಅಮ್ಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಸುಮಾರ್ ಎಳಾರ್ ದುಸ್ರ್ಯಾ-ದುಸ್ರ್ಯಾ ತರಾನ್ ಪ್ರವಾದ್ಯಾಂಚ್ಯಾ ಮುಖಾಂತರ್ ಬೊಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:1
35 ತಿಳಿವುಗಳ ಹೋಲಿಕೆ  

“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II


ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.


ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.


ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;


“ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು