Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನೇ, ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ, ಗಗನಮಂಡಲವು ನಿನ್ನ ಕೈಕೆಲಸವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ದೇವರು ಹೀಗೆನ್ನುತ್ತಾನೆ: “ಪ್ರಭುವೇ, ಆದಿಯಲ್ಲಿ ನೀನು ಈ ಲೋಕವನ್ನು ಸೃಷ್ಟಿಸಿದೆ. ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವ್ ಅಸೆಬಿ ಮನ್ತಾ,“ತಿಯಾ ಧನಿಯಾ, ಸಗ್ಳ್ಯಾನ್ ಪಯ್ಲೆ ಜಿಮಿನ್ ರಚ್ಲೆಯ್ ಅನಿ ಖುದ್ದ್ ತುಜ್ಯಾಚ್ ಹಾತಾನಿ ತಿಯಾ ಮಳ್ಬಾಕ್ನಿ ಬಿ ರಚ್ಲೆಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:10
17 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು