Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:11 - ಕನ್ನಡ ಸತ್ಯವೇದವು C.L. Bible (BSI)

11 ಇವುಗಳೆಲ್ಲವೂ ಅಳಿಯುತ್ತವೆ ನೀನಾದರೋ ಸದಾ ಉಳಿಯುವೆ. ಹಳತಾಗುವುವು ಇವೆಲ್ಲಾ ಬಟ್ಟೆಬರೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವು ನಾಶವಾಗುವವು, ಆದರೆ ನೀನು ಶಾಶ್ವತವಾಗಿರುತ್ತೀ; ಅವೆಲ್ಲವೂ ವಸ್ತ್ರದಂತೆ ಹಳೇವಾಗುವವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇವೆಲ್ಲವು ನಾಶವಾಗುತ್ತವೆ, ಆದರೆ ನೀನು ಶಾಶ್ವತವಾಗಿರುವೆ. ಎಲ್ಲಾ ವಸ್ತುಗಳೂ ವಸ್ತ್ರಗಳಂತೆ ಹಳೆಯವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜಿಮಿನ್ ಅನಿ ಮಳಬ್ ನಾ ಪತ್ತೊ ಹೊವ್ನ್ ಜಾತಾತ್, ಖರೆ ತಿಯಾ ತಸೊಚ್ ರ್‍ಹಾತೆಯ್, ತಿ ಸಗ್ಳಿ ಕಪ್ಡ್ಯಾಚ್ಯಾ ಸಾರ್ಕೆ ಜುನ್ನಿ ಹೊವ್ನ್ ಪಿಂಜುನ್ ಜಾತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:11
22 ತಿಳಿವುಗಳ ಹೋಲಿಕೆ  

ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು