Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಕನ್ನಾಬಿ ಅಪ್ನಾಚ್ಯಾ ಖಲ್ಯಾಬಿ ದುತಾಕ್ನಿ, “ತುಜ್ಯಾ ದುಸ್ಮನಾಕ್ನಿ ತುಜ್ಯಾ ಪಾಯ್ ಥವ್ತಲ್ಯಾ ಮ್ಹನಿಚ್ಯಾ ಬುಡಿ ಹಾನಿ ಪತರ್ ಹಿತ್ತೆ ಮಾಜ್ಯಾ ಉಜ್ವ್ಯಾ ಬಾಜುಕ್ ಬಸ್” ಮನುಕ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:13
16 ತಿಳಿವುಗಳ ಹೋಲಿಕೆ  

ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


“ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.”


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು