Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3 ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೊ ಲೆಕ್ ಅಪ್ಲ್ಯಾ ಬಾಬಾಚ್ಯಾಚ್ ಮಹಿಮೆಚೊ ಉಜ್ವೊಡ್ ಅನಿ ತೆಚ್ಯಾ ರುಪಾಚೊ ಸಗ್ಳೊ ಪ್ರತಿರುಪ್ ಹೊವ್ನ್ ಹಾಯ್; ತೊ ಅಪ್ನಾಚ್ಯಾ ಘಟ್‍ಮುಟ್ಟ್ ಗೊಸ್ಟಿಯಾನಿ ಸಗ್ಳಿ ಸೃಸ್ಟಿ ಚಾಲ್ವುನ್ ಘೆವ್ನ್ ಜಾತಾ, ಮಾನುಸ್‍ ಜಾತಿಚೊ ಪಾಪ್ ಧುವ್ನ್ ಕಾಡುನ್ ಹೊಲ್ಲ್ಯಾ ತನ್ನಾ ತೊ ಸರ್ಗಾರ್ ಮಹಿಮೆವಂತ್ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:3
42 ತಿಳಿವುಗಳ ಹೋಲಿಕೆ  

ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.


ಒಂದು ಮರಣ ಶಾಸನವು ಪರಿಣಾಮಕಾರಿಯಾಗಬೇಕಾದರೆ, ಅದನ್ನು ಬರೆದಾತನು ಸತ್ತಿದ್ದಾನೆಂಬುದು ಖಚಿತವಾಗಬೇಕು;


ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು