Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈತನು ದೇವದೂತರಿಗಿಂತಲೂ ಉತ್ತಮನಾದನು; ಅವರಿಗಿಂತ ಶ್ರೇಷ್ಠವಾದ ಹೆಸರನ್ನು ಹೊಂದಿದನಲ್ಲಾ; ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೆಕ್ ದೆವಾಚ್ಯಾ ದುತಾಂಚ್ಯಾನಿಬಿ ಮೊಟೊ, ದೆವಾನ್ ದೆವ್‍ದುತಾಂನಿಬಿ ಮೊಟೆ ನಾವ್ ತೆಕಾ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:4
11 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು