Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ತಿರಿಗಿ ಬರಮಾಡುವಾಗ ದೇವರ ದೂತರೆಲ್ಲರೂ ಆತನಿಗೆ ಅಡ್ಡ ಬೀಳಲಿ ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ದೆವ್ ಅಪ್ನಾಚ್ಯಾ ಪಯ್ಲೆ ಜಲಮಲ್ಯಾ ಲೆಕಾಕ್ ಘೆವ್ನ್ ಯೆಲ್ಲ್ಯಾ ತನ್ನಾ ತೆನಿ ಮಟ್ಲ್ಯಾನ್, ತೊ ಹ್ಯಾ ಜಗಾತ್ ಧಾಡ್ನಾರ್ ಹೊತ್ತೊ ತನ್ನಾ, ದೆವಾನ್,“ದೆವಾಚ್ಯಾ ಸಗ್ಳ್ಯಾ ದುತಾನಿ ತೆಕಾ ಆರಾದನ್ ಕರುಕ್ ಪಾಜೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:6
17 ತಿಳಿವುಗಳ ಹೋಲಿಕೆ  

ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು