Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಲೆಕಾಚ್ಯಾ ವಿಶಯಾತ್ ತೊ ಮನ್ತಾ, “ಯೆ ದೆವಾ ತುಜೊ ರಾಜ್ ಸದಾ ಸರ್ವತಾ ಪತರ್ ರ್‍ಹಾತಾ! ತಿಯಾ ತುಜ್ಯಾ ಲೊಕಾಂಚ್ಯಾ ವರ್ತಿ ನಿತಿಚೊ ರಾಜ್ ಚಾಲ್ವುತೆಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:8
33 ತಿಳಿವುಗಳ ಹೋಲಿಕೆ  

ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು