Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:10 - ಕನ್ನಡ ಸತ್ಯವೇದವು C.L. Bible (BSI)

10 ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹ್ಯಾಚ್ ಇಚ್ಚ್ಯಾಸಾರ್ಕೆ ಜೆಜು ಕ್ರಿಸ್ತಾಚ್ಯಾ ಆಂಗಾಚ್ಯಾ ಎಕುಚ್‍ದಾ ಕರಲ್ಯಾ ಬಲಿ ವೈನಾ ಅಮಿ ಪವಿತ್ರ್ ಹೊಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:10
25 ತಿಳಿವುಗಳ ಹೋಲಿಕೆ  

ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು