Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹರ್ ಎಕ್ ಯಾಜಕಾ ಸದ್ದಿ ಬಲಿ ಭೆಟ್ವುತಲ್ಯಾ ಕಟ್ಟ್ಯಾಚಿ ಸೆವಾ ಕರುನ್ ಪರ್‍ತು ಪರ್ತುನ್ ಎಕುಚ್ ನಮನ್ಯಾಚಿ ಬಲಿ ಭೆಟ್ಟುತಾತ್, ಹೊಲ್ಯಾರ್ಬಿ ತ್ಯಾ ಬಲಿಯಾಕ್ನಿ ಪಾಪ್ ಧುವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:11
21 ತಿಳಿವುಗಳ ಹೋಲಿಕೆ  

ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.


ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.


ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.


ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.


ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು.


ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?


ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು