Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:12 - ಕನ್ನಡ ಸತ್ಯವೇದವು C.L. Bible (BSI)

12 ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಹ್ಯಾ ಯಾಜಕಾನ್ ಸಗ್ಳ್ಯಾ ಪಾಪಾಂಚ್ಯಾ ಪರಿಹಾರ್ ಸಾಟ್ನಿ ಎಗ್ದಾಚ್ ಎಕುಚ್ ಬಲಿ ಭೆಟ್ವುಲ್ಯಾನ್, ಅನಿ ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:12
15 ತಿಳಿವುಗಳ ಹೋಲಿಕೆ  

ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.


ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು