Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:22 - ಕನ್ನಡ ಸತ್ಯವೇದವು C.L. Bible (BSI)

22 ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರ್ಯ್ಯಾ ಮನಾನ್ ಅನಿ ಘಟ್ಟ್ ವಿಶ್ವಾಸಾಚ್ಯಾ ಖಾತ್ರಿ ಜೆ ಚುಕಿತ್ ಹೊತ್ತಿ ಭುತ್ತುರ್ಲಿ ಮನಾ ಪವಿತ್ರ್ ಕರುನ್ ಅನಿ ಪವಿತ್ರ್ ಪಾನಿಯಾನ್ ಧುವ್ನ್ ಘೆವ್ನ್ ದೆವಾಚ್ಯಾ ಜಗೊಳ್ ಜಾಂವ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:22
66 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


“ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.


ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ನೀತಿಯುತ ನಿನ್ನ ವಿಧಿಗಳನು ಕಲಿಯುವೆನಯ್ಯಾ I ಯಥಾರ್ಥ ಹೃದಯದಿಂದ ನಿನ್ನ ಸ್ತುತಿಪೆನಯ್ಯಾ II


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ನಿನ್ನ ಕರುಣೆಯನು ಕೋರಿದೆನು ಮನಸಾರ I ಪ್ರಸನ್ನನಾಗು ನನಗೆ ನಿನ್ನ ನುಡಿಗನುಸಾರ II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು;


ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು