Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:23 - ಕನ್ನಡ ಸತ್ಯವೇದವು C.L. Bible (BSI)

23 ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅಮಿ ಪರ್ಗಟ್ ಕರ್‍ತಲೊ ಬರೊಸೊ ಘಟ್ ಸಂಬಾಳುನ್ ಘೆಂವ್ವಾ, ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಗೊಸ್ಟ್ ದಿಲ್ಲೊ ದೆವ್ ಕನ್ನಾಬಿ ವಿಸ್ವಾಸಿ ಎಕಾಮಕಾಚಿ ಕಾಳ್ಜಿ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:23
16 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು