Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:25 - ಕನ್ನಡ ಸತ್ಯವೇದವು C.L. Bible (BSI)

25 ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಭೆಯಾಗಿ ಕೂಡಿಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿಸೋಣ. ಕರ್ತನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅಮ್ಚ್ಯಾ ಮದ್ದಿ ಚಾಲು ಹೊತ್ತಿ ಎಕಾಕ್ಡೆ ಮಿಳುನ್ ಯೆತಲಿ ಸವಯ್, ಅಮಿ ಸೊಡುಚೆ ನ್ಹಯ್ ಉಲ್ಲ್ಯಾ ಲೊಕಾನಿ ಸೊಡುನ್ ದಿಲಾತ್, ಖರೆ ಅಮಿ, ಖರೆಚ್‍ಬಿ ಅಮಿ ಎಕಾಮೆಕಾಕ್ನಿ ಜಾಸ್ತಿ ಉಮ್ಮೆದ್ ದಿವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ಜಗೊಳ್ ಯೆಲಾ ತೊ ತುಮಿ ಬಗ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:25
32 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು