Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:27 - ಕನ್ನಡ ಸತ್ಯವೇದವು C.L. Bible (BSI)

27 ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಲೈ ಭಿಂಯಾನ್ ರಾಕಿತ್ ಹೊತ್ತ್ಯಾ ನ್ಯಾಯ್ ನಿರ್ನಯಾಚೊ ದಿಸ್ ದೆವಾಚ್ಯಾ ವಿರೊದ್ಯಾಕ್ನಿ ಜಾಳ್ವುತಲಿ ಮೊಟಿ ಆಗ್ ಹೆ ಸಗ್ಳೆ ಅಮ್ಚ್ಯಾ ಫಿಡೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:27
41 ತಿಳಿವುಗಳ ಹೋಲಿಕೆ  

ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು