Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:28 - ಕನ್ನಡ ಸತ್ಯವೇದವು C.L. Bible (BSI)

28 ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆಯ ವಿಧಿಗಳನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳ ಮಾತಿನ ಮೇಲೆ ಕನಿಕರವಿಲ್ಲದೆ ಮರಣದಂಡನೆ ಆಗುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮೊಯ್ಜೆಚೆ ಖಾಯ್ದೆ ಮೊಡ್ತಾ ಹೊಲ್ಯಾರ್ ತೆಕಾ ದೊನ್ ನಾತರ್ ತಿನ್ ಸಾಕ್ಷಿಯಾಂಚ್ಯಾ ವೈನಾ ಉಲ್ಲಿಬಿ ದಯಾ ದಾಕ್ವಿನಸ್ತಾನಾ ಮರನಾಚಿ ಶಿಕ್ಷಾ ದಿತ್ಯಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:28
17 ತಿಳಿವುಗಳ ಹೋಲಿಕೆ  

ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.


ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಏಕೆಂದರೆ ದೇವರೇ ಮೋಶೆಗೆ ಈ ರೀತಿ ಹೇಳಿದ್ದಾರೆ: “ಯಾರ ಮೇಲೆ ದಯೆತೋರಲು ನನಗೆ ಇಷ್ಟವಿದೆಯೋ ಅವರ ಮೇಲೆ ದಯೆತೋರುವೆನು ಯಾರ ಮೇಲೆ ಕನಿಕರತೋರಲು ನನಗೆ ಮನಸ್ಸಿದೆಯೋ ಅವರ ಮೇಲೆ ಕನಿಕರ ತೋರುವೆನು.”


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು