Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:29 - ಕನ್ನಡ ಸತ್ಯವೇದವು C.L. Bible (BSI)

29 ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕೊನ್‍ತರಿ ಎಕ್ಲೊ ದೆವಾಚ್ಯಾ ಲೆಕಾಕ್ ತುಡ್ವುನ್ ಕರಾರ್ ಘಟ್ಟ್ ಕರಲ್ಯಾ ಅಪ್ನಾಕ್ ಪವಿತ್ರ್ ಕರಲ್ಯಾ ರಗ್ತಾಕ್ ಅಶುದ್ದ್ ಮನುನ್ಗೆವ್ನ್ ದೆವಾಚಿ ಕುರ್ಪಾ ಹೊವ್ನ್ ಹೊತ್ತ್ಯಾ ಆತ್ಮ್ಯಾಕ್ ಅವಮಾನ್ ಕರಲೊ ರಾಲ್ಯಾರ್ ತೆಕಾ ಕವ್ಡಿ ಮೊಟಿ ಶಿಕ್ಷಾ ಗಾವ್ತಾ ಅಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:29
40 ತಿಳಿವುಗಳ ಹೋಲಿಕೆ  

ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.


“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಹೀಗೆ ಚಿಮುಕಿಸುವಾಗ, “ದೇವರು ನಿಮಗೆ ಆಜ್ಞಾಪಿಸಿರುವ ಒಡಂಬಡಿಕೆಯ ರಕ್ತವಿದು,” ಎಂದು ಹೇಳಿದನು.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.


“ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು