Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:31 - ಕನ್ನಡ ಸತ್ಯವೇದವು C.L. Bible (BSI)

31 ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಝಿತ್ತ್ಯಾ ದೆವಾಚ್ಯಾ ಹಾತಿತ್ ಗಾವ್ನ್ ಪಡ್ತಲೆ ಕವ್ಡೆ ಭಯಾನಕ್ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:31
14 ತಿಳಿವುಗಳ ಹೋಲಿಕೆ  

ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.


ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.


ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು