Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:33 - ಕನ್ನಡ ಸತ್ಯವೇದವು C.L. Bible (BSI)

33 ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕೆಲವು ಸಾರಿ ನೀವು ನಿಂದೆಗಳನ್ನೂ ಸಂಕಟಗಳನ್ನೂ ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಸೇರಿದವರಾಗಿದ್ದು ಕಷ್ಟಾನುಭವಿಗಳಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಎಕ್ ವಾಟೆನ್ ಸಗ್ಳ್ಯಾಂಚ್ಯಾ ಇದ್ರಾಕ್ ನಿಂದಾ ಅನಿ ತರಾಸ್ ಸೊಸ್ಲ್ಯಾಸಿ, ಅನಿ ಎಕ್ ವಾಟೆನ್ ತಸ್ಲೊ ಕಸ್ಟ್ ಸೊಸ್ತಲ್ಯಾಂಚೆ ವಾಂಗ್ಡಿ ತುಮಿ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:33
19 ತಿಳಿವುಗಳ ಹೋಲಿಕೆ  

ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.


ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.


ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು