Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:35 - ಕನ್ನಡ ಸತ್ಯವೇದವು C.L. Bible (BSI)

35 ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತಸೆ ಹೊಲ್ಯಾರ್, ತುಮ್ಚೊ ಹ್ಯೊ ಧೈರೊ ಸೊಡುನ್ ದಿವ್‍ನಕಾಸಿ ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಧೈರ್‍ಯಾಕ್ ಭೊಮಾನ್ ಕಮ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:35
15 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


“ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು